ಬಾಲ ಭವನ ಕಟ್ಟಡ ನಿರ್ಮಾಣ ಶಾಸಕರಿಂದ ಸ್ಥಳ ವೀಕ್ಷಣೆ

ಸುರಪುರ ಟೈಮ್ಸ್ ವಾರ್ತೆ
ಸುರಪುರ;ಮಕ್ಕಳಲ್ಲಿ ಸೃಜನಶೀಲತೆಯನ್ನು ಹೆಚ್ಚಿಸಲು ಸಂಗೀತ, ನೃತ್ಯ ,ಚಿತ್ರಕಲೆ, ಕಂಪ್ಯೂಟರ್ ಜ್ಞಾನ, ವಿಜ್ಞಾನ ಸೇರಿದಂತೆ ಪಠ್ಯೇತರ ಚಟುವಟಿಕೆಗಳನ್ನು ಬೆಳೆಸಿಕೊಳ್ಳಲು ಹಾಗೂ ಬೇಸಿಗೆ ಸಮಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆರರಿಂದ ಹದಿನಾರು ವರ್ಷ ವಯಸ್ಸಿನ ಮಕ್ಕಳಿಗೆ ವಿಶೇಷ ತರಬೇತಿ ಶಿಬಿರಗಳಾದ ಸಂಗೀತ, ನೃತ್ಯ ,ಚಿತ್ರಕಲೆ, ಕಂಪ್ಯೂಟರ್ ಜ್ಞಾನ, ವಿಜ್ಞಾನ, ಒಳ ಆಟಗಳು, ಮಕ್ಕಳ ಮನರಂಜನಾ ಕಾರ್ಯಕ್ರಮಗಳು ಸೇರಿದಂತೆ ಅಂಗನವಾಡಿಯ ಆಶಾ ಕಾರ್ಯಕರ್ತೆಯರಿಗೆ ಸಭೆ ಮತ್ತು ಸಮಾರಂಭಗಳನ್ನು ಆಯೋಜಿಸಲು ಹಾಗೂ ಚಿಕ್ಕ ಮಕ್ಕಳ ಬೌದ್ಧಿಕ ಬೆಳವಣಿಗೆ ಆಗಲಿ ಎಂಬ ಉದ್ದೇಶದೊಂದಿಗೆ ಸರ್ಕಾರ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಶಾಸಕ ರಾಜ ವೇಣುಗೋಪಾಲ ನಾಯಕ ಹೇಳಿದರು.ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ತಹಸೀಲ್ ರೋಡ್ ಎಡಭಾಗದಲ್ಲಿರುವ ಖಾಲಿ ಜಾಗದಲ್ಲಿ ಸುಮಾರು 80×60 ವಿಸ್ತರಣೆದಲ್ಲಿ ಸುಸಜ್ಜಿತವಾದ ಮಕ್ಕಳ ಪ್ರತಿಭೆಯನ್ನು ಹೊರ ಹಾಕಲು ಬಾಲ ಭವನ ಕಟ್ಟಡ ನಿರ್ಮಾಣ ಮಾಡಲು ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ವಿಠ್ಠಲ್ ಯಾದವ್, ಮಲ್ಲಣ್ಣ ಸಾಹುಕಾರ ಮುಧೋಳ, ನಗರಸಭೆ ಸದಸ್ಯರಾದ ನಾಸಿರ ಕುಂಡಾಲೆ, ಶಕಿಲ ಅಹ್ಮದ್, ಎಇಇ ಶಾಂತಪ್ಪ, ಸಿಡಿಪಿಒ ಅನಿಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!