ಕಾಲುವೆಗಳಿಗೆ ನೀರು ಹರಿಸಲು ಆಗ್ರಹ ಡಿಸಿಎಂ, ಎಂಡಿಗೆ ಶಾಸಕ ಆರ್‌ವಿಎನ್ ಮನವಿ


ಸುರಪುರ ಟೈಮ್ಸ್ ವಾರ್ತೆ
ಸುರಪುರ : ನಾರಾಯಣಪುರ ಜಲಾಶಯದಿಂದ ಇನ್ನೂ ಹಲವು ದಿನಗಳವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಯಾದಗಿರಿ ಜಿಲ್ಲೆಯ ರೈತ ಮುಖಂಡರು ಭತ್ತದ ಬೆಳೆ ಸ್ಥಿತಿಯನ್ನು ಡಿಸಿಎಂ ಅವರಿಗೆ ತೋರಿಸಿದರು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಸೇರಿ ರೈತ ಮುಖಂಡರು ಇತರರಿದ್ದರು.
ಕೆಬಿಜೆಎನ್‌ಎಲ್ ಎಂಡಿಗೆ ಮನವಿ
ನಾರಾಯಣಪುರ ಜಲಾಶಯದಿಂದ ಎಡ ದಂಡೆ ಕಾಲುವೆಗೆ ಇನ್ನೂ ಹಲವು ದಿನಗಳವರೆಗೆ ನೀರು ಹರಿಸಬೇಕು ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಬುಧವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಯಾದಗಿರಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಸರೆಡ್ಡಿ ಪಾಟೀಲ್ ಹಾಗೂ ರೈತ ಮುಖಂಡರು ಇದ್ದರು.