ಮೀನುಗಾರಿಕೆಗೆ ಸಲಕರಣೆ ಕಿಟ್ ವಿತರಿಸಿದ: ಶಾಸಕ ರಾಜಾ ವೇಣುಗೋಪಾಲ ನಾಯಕ

ಸುರಪುರ ಟೈಮ್ಸ್ ವಾರ್ತೆ
ಸುರಪುರ : ನಗರದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 2024 25 ನೇ ಜಿಲ್ಲಾ ಪಂಚಾಯತ ,ರಾಜ್ಯ ವಲಯ ಯೋಜನೆ ಅಡಿಯಲ್ಲಿ ಆಯ್ಕೆಯಾದ 30 ಫಲಾನುಭವಿಗಳಿಗೆ ಮೀನುಗಾರಿಕೆ ಸಲಕರಣೆ ಕಿಟ್ ಶಾಸಕ ರಾಜಾ ವೇಣುಗೋಪಾಲ ನಾಯಕ ವಿತರಿಸಿದರು.ನಂತರ ಮಾತನಾಡಿದ ಅವರು, ಮೀನುಗಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಸಹಾಯಧನ ಸೇರಿದಂತೆ ಪ್ರಾಣ ರಕ್ಷಣೆಗೆ ಕಿಟ್‌ಗಳು, ಮೀನು ಹಿಡಿಯುವ ಬಲೆಗಳು, ಕ್ರೇಟುಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಅರ್ಹರು ಪಡೆದುಕೊಳ್ಳಬೇಕು. ಮೀನುಗಾರರು ಸರ್ಕಾರದಿಂದ ನೀಡುವ ಸವಲತ್ತುಗಳನ್ನು ಬಳಸಿಕೊಂಡು ಜೀವನವನ್ನು ಉತ್ತಮಗೊಳಿಸಿಕೊಳ್ಳಬೇಕು. ಜತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಮೀನುಗಾರಿಕೆ ಸಹಾಯಕ ನಿರ್ದೇಶಕರು ಶ್ರೀಮತಿ ಪದ್ಮಾವತಿ ಹಾಗೂ ಇಲಾಖೆಯ ಸಿಬ್ಬಂದಿಗಳು ಮತ್ತು ಗಂಗಾಮತ ಮೀನುಗಾರರ ಸಹಕಾರ ಸಂಘದ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.


