ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಡಾ|ಬಿ.ಆರ್. ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆ: ಸರಕಾವಸ್
ಸುರಪುರ ಟೈಮ್ಸ್ ವಾರ್ತೆ
ಸುರಪುರ: ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ ಅಂಬೇಡ್ಕರ್ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಏ. 14 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಎಚ್.ಎ. ಸರಕಾವಸ್ ತಿಳಿಸಿದರು
ನಗರದ ತಹಸೀಲ್ದಾರ ಕಚೇರಿಯಲ್ಲಿ ಸೋಮವಾರ ಡಾ| ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಯೊಳಗಡೆ ಶಾಲಾ-ಕಾಲೇಜು ಅಂಗನವಾಡಿ, ಗ್ರಾಪಂ, ಬ್ಯಾಂಕ್, ಅಂಚೆ ಕಚೇರಿ, ಸೇರಿದಂತೆ ಎಲ್ಲಾ ಕಾರ್ಯಲಯಗಳಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಬೇಕು. ನಂತರ ತಾಲೂಕು ಆಡಳಿತದಿಂದ 9 ಗಂಟೆಗೆ ನಡೆಯುವ ಡಾ| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆಯಲ್ಲಿ ಕಡ್ಡಾಯವಾಗಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಬೇಕು ಎಂದು ಸೂಚಿಸಿದರು
ಬಸ್ ನಿಲ್ದಾಣ ಹತ್ತಿರದ ಡಾ| ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಗಾಂಧೀಜಿ ವೃತ್ತ, ನಗರದ ರಾಜಬೀದಿಗಳ ಮೂಲಕ ತಹಸೀಲ್ದಾರ್ ಕಚೇರಿವರೆಗೆ ನಡೆಯಲಿದ್ದು, ಆವರಣದಲ್ಲಿ ಬಹಿರಂಗ ಸಭೆ ಜರುಗವುದು. ಸ್ಥಳೀಯ ಸಂಸ್ಥೆಗಳು ಗ್ರಾಮ ಮತ್ತು ನಗರದಲ್ಲಿರುವ ಎಲ್ಲಾ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕು. ಬೇಸಿಗೆ ನಿಮಿತ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಮುಖಂಡರಾದ ಮಾನಪ್ಪ ಕಟ್ಟಿಮನಿ, ಯಲ್ಲಪ್ಪ ಹುಲಿಕಲ್, ನಾಗಣ್ಣ ಕಲ್ಲದೇವನಹಳ್ಳಿ, ಭೀಮರಾಯ ಸಿಂದಗೇರಿ, ನಿಂಗಣ್ಣ ಗೋನಾಲ, ಮಾಳಪ್ಪ ಕಿರದಳ್ಳಿ, ರಾಹುಲ್ ಹುಲಿಮನಿ, ಶಿವಮೋನಯ್ಯ ನಾಯಕ, ಶಿವಲಿಂಗ ಹಸನಾಪುರ, ತಿಪ್ಪಣ್ಣ ಶೆಳ್ಳಗಿ, ಮಾನಪ್ಪ ಶೆಳ್ಳಗಿ, ಬಸವರಾಜ ದೊಡ್ಡಮನಿ, ನಾಗರಾಜ ಓಕಳಿ, ರಮೇಶ ದೊರೆ ಆಲ್ದಾಳ, ರಾಜು ಬಡಿಗೇರಾ, ಶೇಖರ ಮಂಗಳೂರ, ಹಣಮಂತ ಬೊಮ್ಮನಹಳ್ಳಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು .


ಪೋಟೊ: ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ನಿಮಿತ್ತ ಪೂರ್ವಭಾವಿ ಸಭೆ ನಡೆಯಿತು.
