ವಿದ್ಯುತ್ ಅವಘಡ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಸಹೋದರ ರಾಜಾ ಸಂತೋಷ ನಾಯಕ ಭೇಟಿ

ಸುರಪುರ ಟೈಮ್ಸ್ ವಾರ್ತೆ
ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಗ್ರಾಮದ ಹಲವು ಮನೆಗಳು ಹಾನಿಯಾಗಿರುವ ಪರಿಣಾಮವಾಗಿ ಬುಧವಾರ ಬೆಳಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶಿಲಾ .ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದಲ್ಲಿ ಅವರು ಮನೆ ಮನೆಗೆ ಭೇಟಿ ನೀಡಿ ವಿದ್ಯುತ್ ಅವಘಡ ಸಂಭವಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ 2 ತಂಡಗಳನ್ನು ರಚಿಸಿ ಗ್ರಾಮದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ತಾಲೂಕ ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುರಪುರ ಶಾಸಕರ ಸಹೋದರ ರಾಜಾ ಸಂತೋಷ ನಾಯಕ ಅವರು ಮಾತನಾಡಿ ಆದಷ್ಟು ಬೇಗ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಸುವಂದೆ ತಿಳಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳು,ಜೆಸ್ಕಾಂ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

