ಜಾಲಿಬೆಂಚಿ ಗ್ರಾಮಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ,ಗಾಯಾಳುಗಳ ಆರೋಗ್ಯ ವಿಚಾರಣೆ
ಸುರಪುರ ಟೈಮ್ಸ್ ವಾರ್ತೆ
ಸುರಪುರ:ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಇತ್ತೀಚಿಗೆ ಬಿಸಿದ ಭಾರಿ ಬಿರುಗಾಳಿ ಸಹಿತ ಮಳೆಗೆ ಗ್ರಾಮದಲ್ಲಿ ವಿದ್ಯುತ್ ಅವಘಡ ಉಂಟಾಗಿ ಹಲವರು ಗಾಯಗೊಂಡ ಹಿನ್ನೆಲೆಯಲ್ಲಿ ಇಂದು ಶಾಸಕ ರಾಜಾವೇಣುಗೋಪಾಲ ನಾಯಕ ಗ್ರಾಮಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಬಿರುಗಾಳಿಯ ಹೊಡೆತಕ್ಕೆ ಗ್ರಾಮದ ನೂರಕ್ಕೂ ಹೆಚ್ಚು ಮನೆಗಳಲ್ಲಿ ವಿದ್ಯುತ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಹಾನಿಯಾಗಿತ್ತು. ಸದ್ಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಶಾಸಕರು ಗ್ರಾಮದಲ್ಲಿ ಹಾನಿಗೊಳಗಾದ ವಿದ್ಯುತ್ ಕಂಬಗಳು ಎಲ್ ಟಿ ಲೈನ್ ಗಳನ್ನು ಈಗಾಗಲೇ ಬದಲಾಯಿಸಲಾಗಿದೆ, ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು ಇನ್ನೂ ಗಾಯಗೊಂಡ ಗಾಯಾಳುಗಳ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಗ್ರಾಮಕ್ಕಾಗಿರುವ ಹಾನಿಯಾಗಿರುವ ಸಂಪೂರ್ಣ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯದರ್ಶಿ ವಿಠ್ಠಲ ಯಾದವ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಮತ್ತು ಸುರಪುರ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು, ಜೆಸ್ಕಾಂ ಅಧಿಕಾರಿಗಳು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.


