ಪಟ್ಟಣದ ವಾರ್ಡ ನಂ.3 ರಲ್ಲಿ ಬರುವ ಕೆಬಿಜೆಎನ್‌ಎಲ್ ವ್ಯಾಪ್ತಿಗೆ ಒಳಪಡುವ ಎಸ್‌ಬಿಸಿ ಕ್ಯಾಂಪ್‌ಗೆ ಜೆಜೆಎಂ ಅಡಿಯಲ್ಲಿ ಕುಡಿಯುವ ನೀರು ಒದಗಿಸಲು ರವಿಶಂಕರ ಸೊನ್ನದ ಮನವಿ

ಸುರಪುರ ಟೈಮ್ಸ್ ವಾರ್ತೆ
ಕೆಂಭಾವಿ:ಪಟ್ಟಣದ ವಾರ್ಡ ನಂ.3 ರಲ್ಲಿ ಬರುವ ಕೆಬಿಜೆಎನ್‌ಎಲ್ ವ್ಯಾಪ್ತಿಗೆ ಒಳಪಡುವ ಎಸ್‌ಬಿಸಿ ಕ್ಯಾಂಪ್‌ಗೆ ಜೆಜೆಎಂ ಅಡಿಯಲ್ಲಿ ಕುಡಿಯುವ ನೀರು ಒದಗಿಸಬೇಕು ಎಂದು ಪುರಸಭೆ ಸದಸ್ಯ ರವಿಶಂಕರ ಸೊನ್ನದ ಕೊರಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅತಿ ಹೆಚ್ಚಿನ ಜನಸಂಖ್ಯೆಯುಳ್ಳ ವಾರ್ಡ ಇದಾಗಿದೆ. ಎಲ್ಲ ಮೂಲಭೂತ ಸೌಕರ್ಯಗಳನ್ನು ವಾರ್ಡಿಗೆ ಪುರಸಭೆ ವತಿಯಿಂದ ಮಾಡಿಸಲಾಗಿದೆ. ಕಳೆದ ಅನೇಕ ವರ್ಷಗಳಿಂದ ಎಸ್‌ಬಿಸಿ ಕ್ಯಾಂಪ್‌ನಲ್ಲಿ ನೀರಿನ ಸಮಸ್ಯೆ ತಲೆದೋರುತ್ತದೆ. ಆದರೆ ಎಸ್‌ಬಿಸಿ ಕ್ಯಾಂಪ್ ಏರಿಯಾದಲ್ಲಿ ವಾಸಿಸುತ್ತಿರುವ ಜನರಿಗೆ ಬಹು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು ನಿಗಮದವರು ನೀರಿನ ವ್ಯವಸ್ಥೆ ಮಾಡದೆ ಇರುವುದರಿಂದ ಅಲ್ಲಿ ವಾಸಿಸುವ ಜನರ ಮಾನವೀಯತೆ ದೃಷ್ಟಿಯಿಂದ ಹಾಗೂ ಮತದಾರರ ಭಾವನೆಗೆ ಸ್ಪಂದಿಸುವ ದೃಷ್ಟಿಯಿಂದ ಹಲವು ಬಾರಿ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಿಸಲಾಗಿದೆ.
ಸದ್ಯ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಮನೆ ಮನೆಗೆ ನಲ್ಲಿ ವ್ಯವಸ್ಥೆ ಮಾಡಿಸಿದ್ದು ಪುರಸಭೆಯ ಅಧ್ಯಕ್ಷರು, ಅಧಿಕಾರಿಗಳ ಹಾಗೂ ಸಂಬಂಧಪಟ್ಟ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳನ್ನು ಭೇಟಿ ಮಾಡಿ ಅವರೊಂದಿಗೆ ಸುದೀರ್ಘ ಚರ್ಚಿಸಿಲಾಗಿ, ಅಧಿಕಾರಿಗಳು ಮೌಖಿಕ ಅನುಮತಿ ನೀಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಅಧಿಕಾರಿಗಳಿಗೆ ಮನೆ ಮನೆಗೆ ನೀರಿನ ವ್ಯವಸ್ಥೆ ಮಾಡಲು ಮನವಿ ಮಾಡಲಾಗಿದೆ. ಯಾರೂ ಕುಡಿಯುವ ನೀರಿನ ಯೋಜನೆಯಲ್ಲಿ ಗೊಂದಲ ಮಾಡಬಾರದು, ಜೆಜೆಎಂ ಕಾಮಗಾರಿ ಪೂರ್ಣ ಮಾಡಲು ಮಾನವೀಯತೆ ದೃಷ್ಟಿಯಿಂದ ಎಲ್ಲ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದ್ದಾರೆ.

ಕೆಂಭಾವಿ