ಅನಧಿಕೃತ ಕೋಚಿಂಗ್ ನಡೆಸಬೇಡಿ: ಬಿಇಒ

ಸುರಪುರ ಟೈಮ್ಸ್ ವಾರ್ತೆ

ಸುರಪುರ : ಹುಣಸಗಿ ಮತ್ತು ಸುರಪುರ ತಾಲೂಕಿನವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೋಚಿಂಗ್ ಸೆಂಟರ್, ವಸತಿ ನಿಲಯಗಳು, ಟ್ಯುಟೋರಿಯಲ್ ಕೇಂದ್ರಗಳು ಮತ್ತು ಬೇಸಿಗೆ ಶಿಬಿರಗಳನ್ನು ನಡಿಸಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸತೀಶ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆ ಅನುಮತಿ ಇಲ್ಲದೆ ಇವುಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಸದರಿ ಬೆಳವಣಿಗೆಗಳು ಬೆಂಗಳೂರಿನ ಶಿಕ್ಷಣ ಆಯುಕ್ತರ ಆದೇಶದಂತೆ ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ನಿಯಮ 35 ರ ವಿರುದ್ಧವಾಗಿರುತ್ತದೆ. ಈಗಾಗಲೇ ಗಮನಕ್ಕೆ ಬಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ. ಆದರೂ ಪುನಃ ಮುಂದುವರೆಸಿದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಬಿಇಒ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!