ಸುರಪುರ ತಹಸಿಲ್‌ನಲ್ಲಿ ಜಯಂತಿ ಪೂರ್ವಭಾವಿ ಸಭೆಮೇ.4ಕ್ಕೆ ಮಹರ್ಷಿ ಭಗೀರಥ ಜಯಂತಿ ಆಚರಣೆ

ಸುರಪುರ ಟೈಮ್ಸ್ ವಾರ್ತೆ
ಸುರಪುರ : ಮೇ.4ರಂದು ಮಹರ್ಷಿ ಭಗೀರಥ ಅವರ ಜಯಂತಿಯನ್ನು ಶ್ರದ್ಧಾ-ಭಕ್ತಿಯೊಂದಿಗೆ ಆಚರಿಸಲಾಗುವುದು ಎಂದು ಗ್ರೇಡ್-೨ ತಹಸೀಲ್ದಾರ್ ಮಲ್ಲಯ್ಯ ದಂಡು ತಿಳಿಸಿದರು.
ಇಲ್ಲಿಯ ಮಿನಿ ವಿಧಾನಸೌಧ ಆವರಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ಎಲ್ಲ ಸರಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು ಸೂಚಿಸಿದರು.
ನಂತರ ಬೆಳಗ್ಗೆ 10 ಗಂಟೆಗೆ ತಹಸಿಲ್ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತದ ವತಿಯಿಂದ ಜಯಂತಿ ಆಚರಿಸಲಾಗುವುದು. ಮಹರ್ಷಿ ಭಗೀರಥ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಬಳಿಕ ಅವರ ಕುರಿತು ಉಪನ್ಯಾಸ ಜರುಗಲಿದೆ. ಎಲ್ಲಾ ಇಲಾಖೆಗಳ ಅನುಷ್ಟಾನ ಅಧಿಕಾರಿಗಳು ಜಯಂತಿಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಭಗೀರಥ ಸಂಘದ ತಾಲೂಕು ಅಧ್ಯಕ್ಷ ಮಾನಪ್ಪ ಜಿ.ಗೋನಾಲ, ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಜಿ.ಬಿ, ಮುಖಂಡರಾದ ರಾಮಚಂದ್ರ ಪೂಜಾರಿ, ಗೌರಿಶಂಕರ ಯನಗುಂಟಿ, ಮಾನಪ್ಪ ಶಹಾಪುರಕರ್, ಗೋಪಾಲ ಪೂಜಾರಿ ದೇವಿಕೇರಾ, ಚಿದಾನಂದ, ವೆಂಕಟೇಶ ಹೆಚ್‌ಡಿ ಗೋನಾಲ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
