ಚಂದ್ರಶೇಖರ ಎಂ. ಪತ್ತಾರ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಸುರಪುರ ಟೈಮ್ಸ್ ವಾರ್ತೆ
ಸುರಪುರ:ರಾಜ್ಯ ಸರಕಾರದ ನೌಕರರಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಕೃಷಿ ಇಲಾಖೆ ಚಂದ್ರಶೇಖರ ಎಂ.ಪತ್ತಾರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಅವರು ಇಲಾಖೆ ಅನೇಕ ಜನಪರ ಕಾರ್ಯಕ್ರಗಳನ್ನು ಯಶಸ್ವಿಯಾಗಿ ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶಿಸ್ತು, ಸಭ್ಯತೆ, ಪಾರದರ್ಶಕ ಆಡಳಿತದಿಂದ ಅಧಿಕಾರಿ ವರ್ಗ ಮತ್ತು ಸಾರ್ವಜನಿಕರಲ್ಲಿ ಮೆಚ್ಚುಗೆ ಗಳಿಸಿರುವ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ದೊರೆತಿರುವುದು ತಾಲೂಕಿಗೆ ಜನತೆಗೆ ಸಂತಸವಾಗಿದು.ಜಿಲ್ಲಾಡಳಿತ ಯಾದಗಿರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಯಾದಗಿರಿ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆಯ ಪ್ರಯುಕ್ತ ಸರ್ವೋತ್ತಮ ಸೇವಾ ಪ್ರಶಸ್ತಿ 2023, 2024 – 2025 ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸರಕಾರಿ ಪದವಿ ಮಹಾವಿದ್ಯಾಲಯ, ಯಾದಗಿರಿಯಲ್ಲಿ ಪ್ರದಾನ ಮಾಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!