ಕ್ರೇಸ್ತ್ ದಿ ಕಿಂಗ್ ಶಾಲೆಗೆ ಉತ್ತಮ ಫಲಿತಾಂಶ

ಸುರಪುರ ಟೈಮ್ಸ್ ವಾರ್ತೆ
ಸುರಪುರ : ನಗರದ ಕ್ರೇಸ್ತ್ ದಿ ಕಿಂಗ್ ಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ-14 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ-26 ವಿದ್ಯಾರ್ಥಿಗಳು ಮತ್ತು 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಗುರುಗಳು ತಿಳಿಸಿದ್ದಾರೆ.
ತಯ್ಯಬಾ ಫುರತ್ ವಿದ್ಯಾರ್ಥಿನಿ 608(ಶೇ.97.28) ಮತ್ತು ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದಿರುತ್ತಾಳೆ. ಭೂಷಣ್-605 (ಶೇ.96.80), ಸುಮಯ್ಯ-588 (ಶೇ.94.08), ಸೋಮಶೇಖರ-579 (ಶೇ.92.64), ನಾಗವೇಣಿ-577 (ಶೇ.92.37), ಅಮೃತಾ-573(ಶೇ.91.68) ಅಂಕ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.






